ಶುಕ್ರವಾರ, ಜೂನ್ 9, 2023
ಪ್ರತಿಷ್ಠಿತ ಶಾಲೆಗಳ ದಾಖಲಾತಿ: 6ನೇ ತರಗತಿಗೆ ಪ್ರವೇಶ ಪರೀಕ್ಷೆ ಜೂನ್ 11 ರಂದು
ಬಳ್ಳಾರಿ,ಜೂ.09(ಕರ್ನಾಟಕ ವಾರ್ತೆ):
2023-24ನೇ ಸಾಲಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ ನೀಡಲು ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅರ್ಹತಾ ಪರೀಕ್ಷೆಯ ಮೂಲಕ ಆಯ್ಕೆ ಮಾಡಬೇಕಾಗಿದ್ದು, ಜೂ.11 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ನಗರದ ಬೆಳಗಲ್ ಕ್ರಾಸ್‍ನ ಆಂಥೋನಿ ಹಾಲ್ ಎದುರುಗಡೆಯ ಸಂತಜೋಸೆಪ್ ಕೋ-ಎಜ್ಯೂಕೇಷನ್ ಪ್ರೌಢಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸಿರುವ ಹಾಗೂ ಪ್ರವೇಶ ಪತ್ರವನ್ನು ಪಡೆದಿರುವ ವಿದ್ಯಾರ್ಥಿಗಳು ನಿಗದಿ ಪಡಿಸಿದ ದಿನದಂದು ಪ್ರವೇಶ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಸಕೀನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ