ಬುಧವಾರ, ಜೂನ್ 21, 2023

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿ: ಅರ್ಜಿ ಆಹ್ವಾನ ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): 2023-24ನೇ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ ವಿದ್ಯಾಲಯದ ಮುಖ್ಯಗುರುಗಳಾದ ಎಂ.ಕುಮಾರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಖಾಲಿ ಸೀಟುಗಳ ದಾಖಲಾತಿಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 05 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಈದ್ಗಾ ರಸ್ತೆಯ ಹೀರಾಳ್‍ಕುಡಂನ ಆದರ್ಶ ವಿದ್ಯಾಲಯ ಅಥವಾ ಮೊ.9449463870ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ