ಗುರುವಾರ, ಜೂನ್ 1, 2023

ರಾಬಕೋವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಿಂದ ವಿಶ್ವ ಹಾಲು ದಿನಾಚರಣೆ ಗ್ರಾಹಕರಿಗೆ ಪರಿಶುದ್ಧ ಹಾಲು ಸರಬರಾಜು ಮಾಡುವುದೇ ರಾಬಕೋವಿ ಮುಖ್ಯ ಉದ್ದೇಶ: ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ತಿರುಪತಪ್ಪ ಬಳ್ಳಾರಿ,ಜೂ.01(ಕನಾಟಕ ವಾರ್ತೆ): ರಾಬಕೋವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟವು ರೈತರ ಹಿತರಕ್ಷಣೆ ಮತ್ತು ಗ್ರಾಹಕರಿಗೆ ತಾಜಾ ಹಾಗೂ ಪರಿಶುದ್ಧ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸರಬರಾಜು ಮಾಡುವುದೇ ಮುಖ್ಯ ಉದ್ದೇಶವಾಗಿದೆ ಎಂದು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಟಿ.ತಿರುಪತಪ್ಪ ಅವರು ಹೇಳಿದರು. ವಿಶ್ವ ಹಾಲು ದಿನಾಚರಣೆ ಅಂಗವಾಗಿ ಬಳ್ಳಾರಿ ನಗರದ ಕಂಟೋನ್‍ಮೆಂಟ್ ಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆವರಣದಲ್ಲಿರುವ ಶಾಲೆಗಳಲ್ಲಿ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಹತ್ವ, ಸಮತೋಲನ ಆಹಾರದಲ್ಲಿರುವ ಪೆÇೀಷಕಾಂಶಗಳು ಹಾಗೂ ಆರೋಗ್ಯಕ್ಕೆ ಅವುಗಳ ಮಹತ್ವ ಕುರಿತು ಗುರುವಾರ ಏರ್ಪಡಿಸಿದ್ದ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 2001 ರಲ್ಲಿ ವಿಶ್ವ ಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು (ಎಫ್‍ಎಒ) ಹಾಲಿನ ಮಹತ್ವದ ಬಗ್ಗೆ ಗುರುತಿಸಿ ವಿಶ್ವ ಹಾಲು ದಿನಾಚರಣೆಯನ್ನು ಆಚರಿಸಲು ಪ್ರಾರಂಭಿಸಲಾಯಿತು. ಡೇರಿ ಉದ್ಯಮಕ್ಕೆ ಸಂಬಂಧಿಸಿದ ಯಾವುದೇ ರೀತಿಯಲ್ಲಿ ಸಾಧ್ಯವಿರುವ ಉಪಕ್ರಮಗಳ ಬಗ್ಗೆ ಅರಿವು ಮೂಡಿಸಲು ಮತ್ತು ಬೆಂಬಲಿಸಲು, ಅವಕಾಶ ಒದಗಿಸಲು ಈ ದಿನದ ಗುರಿಯಾಗಿದೆ ಎಂದು ತಿಳಿಸಿದರು. ಮಾನವನ ಜೀವನದಲ್ಲಿ ಹಾಲಿನ ಅಗತ್ಯತೆಗೆ ಪ್ರಾಮುಖ್ಯತೆ ಹೊಂದಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಒದಗಿಸುವುದಲ್ಲದೇ, ಹಾಲಿನಲ್ಲಿರುವ ಕ್ಯಾಲಿಯಂ, ಪ್ರೋಟಿನ್, ವಿಟಮಿನ್-ಬಿ2 ಮುಂತಾದ ಪೋಷಕಾಂಶಗಳ ಬಗ್ಗೆ ಜನರಿಗೆ ತಿಳಿಸುವುದಾಗಿದೆ ಎಂದರು. ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಎಸ್.ವೆಂಕಟೇಶ್ ಗೌಡ ಅವರು ಪ್ರಾಸ್ತವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಬಕೋವಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ಪ್ರಧಾನ ವ್ಯವಸ್ಥಾಪಕ (ಡೇರಿ) ಜಿ.ಬಿ.ಉದಯಕುಮಾರ್, ಹಾಲು ಒಕ್ಕೂಟದ ವ್ಯವಸ್ಥಾಪಕ (ಶೇಖರಣೆ) ಲಕ್ಕಣ್ಣನವರು, ಒಕ್ಕೂಟದ ಮಾರುಕಟ್ಟೆ ಅಧಿಕಾರಿ ಎಸ್.ವೆಂಕಟೇಶ್ ಗೌಡ, ಉಪ ವ್ಯವಸ್ಥಾಪಕರಾದ (ಮಾರುಕಟ್ಟೆ) ಸಿ.ಎನ್.ಮಂಜುನಾಥ, ಬಾಬು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧೀಕ್ಷಕರಾದ ನಂದಿನಿ, ನಾಗಮಣಿ, ಲೀಲಾವತಿ, ನೀರಜ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಲ್ಲಾ ಗಣ್ಯರಿಗೂ ಮತ್ತು ವಿದ್ಯಾರ್ಥಿಗಳಿಗೆ ನಂದಿನಿ ಗುಡ್ ಲೈಫ್ ಪೆಟ್ ಬಾಟಲ್‍ಗಳನ್ನು ವಿತರಿಸಲಾಯಿತು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ