ಗುರುವಾರ, ಜೂನ್ 1, 2023

ಜಿಲ್ಲಾ ಮಕ್ಕಳ ರಕ್ಷಣಾ ಘಟಕ; ಆಪ್ತಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಆಪ್ತ ಸಮಾಲೋಚಕರ ಹುದ್ದೆಗೆ ಮಕ್ಕಳ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಅನುಭವವಿರುವ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಸಮಾಜ ಕಾರ್ಯ, ಸಮಾಜ ಶಾಸ್ತ್ರ, ಮನೋವಿಜ್ಞಾನ, ಸಾರ್ವಜನಿಕ ಆರೋಗ್ಯಕರ ಕೌನ್ಸ್‍ಲಿಂಗ್, ಪದವೀಧರರು ಅಥವಾ ಕೌನ್ಸ್‍ಲಿಂಗ್ ಕಮ್ಯುನಿಕೇಷನ್ಸ್‍ನಲ್ಲಿ ಪಿಜಿ ಡಿಪೆÇ್ಲೀಮಾ ಹಾಗೂ ಕಂಪ್ಯೂಟರ್‍ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಪ್ರಾವೀಣ್ಯತೆಗಾಗಿ ಸಲ್ಲಿಸಿದ ಸರ್ಕಾರಿ ಅಥವಾ ಪಿಜಿಯಲ್ಲಿ ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 26 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಂಟೋನ್‍ಮೆಂಟ್ ಹತ್ತಿರ ಶಾಂತಿಧಾಮ ಆವರಣದ ಜಿಲ್ಲಾ ಮಕ್ಕಳ ರಕ್ಷಣ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಅಥವಾ ದೂ.08392-294473 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ