ಶುಕ್ರವಾರ, ಜೂನ್ 9, 2023

ಕಂಪ್ಲಿ: ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೋಮಾ ಕೋರ್ಸ್‍ಗೆ ಅರ್ಜಿ ಆಹ್ವಾನ* ಬಳ್ಳಾರಿ,ಜೂ.09(ಕರ್ನಾಟಕ ವಾರ್ತೆ): ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2023-24 ನೇ ಸಾಲಿನ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪೆÇ್ಲೀಮಾ ಕೋರ್ಸ್‍ಗೆ ಪ್ರವೇಶ ಬಯಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರಾದ ಬಾಲಾಂಜಿನೇಯುಲು ಅವರು ತಿಳಿಸಿದ್ದಾರೆ. ಐಟಿಐ ಮತ್ತು ದ್ವಿತೀಯ ಪಿಯುಸಿ (ವಿಜ್ಞಾನ/ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ. ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್ ಇಂಜಿನಿಯರಿಂಗ್ ಕೋರ್ಸ್‍ಗಳು ಲಭ್ಯವಿರುತ್ತವೆ. ಅಭ್ಯರ್ಥಿಗಳು ಜೂನ್ 20 ರವರೆಗೆ ಅರ್ಜಿ ಸಲ್ಲಿಸಬಹುದು. ಜೂ.22 ರಿಂದ 24 ರವರೆಗೆ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಜೂ.23 ರಿಂದ 30 ರವರೆಗೆ ಸೀಟುಗಳು ಭರ್ತಿಯಾಗದೇ ಉಳಿಕೆಯಾದಲ್ಲಿ ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಂಪ್ಲಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್‍ನ ಪ್ರಾಂಶುಪಾಲರ ಕಚೇರಿ ಅಥವಾ ಮೊ.9482994340, 9448918752, 9880509725 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ