ಬುಧವಾರ, ಜೂನ್ 14, 2023

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ಇಂತಹ ಕಾರ್ಯಕ್ರಮಗಳು ಹೆಚ್ಚು ಸಮುದಾಯದ ಮಟ್ಟದಲ್ಲಿ ಪೋóಷಕರಿಗೆ ಮಾಲೀಕರಿಗೆ ಹಮ್ಮಿಕೊಳ್ಳುವುದು ಉತ್ತಮ ಎಂದು ತಹಸಿಲ್ದಾರ ಗುರುರಾಜ್ ಅವರು ಜಾಥಾಕೆ ಚಾಲನೆ ನೀಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘Soಛಿiಚಿಟ ಎusಣiಛಿe ಜಿoಡಿ ಚಿಟಟ ಇಟಿಜ ಅhiಟಜ ಐಚಿbouಡಿ’ ಎಂಬ ಘೋಷವಾಕ್ಯದೋದಿಗೆ ಬುಧವಾರದಂದು ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮತ್ತೊಬ್ಬ ಯೋಜನೆ ನಿರ್ದೇಶಕರಾದ ಮೌನೇಶ್ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ರಾಜ್ ಇಲಾಖೆಯ ಸಹಾಯಕ ನಿರ್ದೇಶಕರು, ಕಾರ್ಮಿಕ ನಿರೀಕ್ಷಕ ರವಿದಾಸ್, ಶಿವರಾಜ್, ಶಾಲಾ ಮುಖ್ಯ ಗುರುಗಳು ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಾಥಾವು ದೊಡ್ಡ ಬಸವಣ್ಣ ದೇವಸ್ಥಾನದ ಮುಂಭಾಗದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ವೇದಿಕೆ ಕಾರ್ಯಕ್ರಮದವರೆಗೆ ತಲುಪಿತು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ