ಶುಕ್ರವಾರ, ಜೂನ್ 16, 2023

ಜೂ.19 ರಂದು ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜೂ.19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 02 ರವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ. ಮಿನಿ ಉದ್ಯೋಗ ಮೇಳದಲ್ಲಿ 06ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಇವರು ತಮ್ಮಲ್ಲಿನ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. *ವಿದ್ಯಾರ್ಹತೆ:* ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪೆÇ್ಲೀಮಾ, ಪದವಿ ಹೊಂದಿರಬೇಕು. ತಮ್ಮ ಮೂಲ ಆಧಾರ್‍ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ (RESUME) ಭಾಗವಹಿಸಬೇಕು. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೊಗ ವಿನಿಮಯ ಕಚೇರಿ ಅಥವಾ ದೂ.08392-273988, ಮೊ.8073365184, 9019692898, 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ