ಗುರುವಾರ, ಜೂನ್ 1, 2023

ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪ್ರವೇಶ ಪರೀಕ್ಷೆ ಜೂ.11 ರಂದು ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): ಸಮಾಜ ಕಾಲ್ಯಾಣ ಇಲಾಖೆಯಿಂದ 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ಕಲ್ಪಿಸಲು ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ಜೂ.01 ರಂದು ನಿಗದಿಪಡಿಸಲಾಗಿದ್ದ ಪ್ರವೇಶ ಪರೀಕ್ಷೆಯನ್ನು ಕಾರಣಾಂತರಗಳಿಂದ ಜೂ.11 ಕ್ಕೆ ಮುಂದೂಡಲಾಗಿದೆ. ಅಂದು (ಜೂ.11 ರಂದು) ಬೆಳಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ನಗರದ ಕೌಲ್‍ಬಜಾರ್ ಸಂತ ಜೋಸೆಫರ ಬಾಲಕರ ಪ್ರೌಢ ಶಾಲೆಯಲ್ಲಿ ಪ್ರವೇಶ ಪರೀಕ್ಷೆ ನಡೆಸಲಾಗುವುದು. ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು (Hall Ticket) ಸಂಬಂಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗಳಿಂದ ಪಡೆದು, ಪರೀಕ್ಷೆಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಅಥವಾ ಕಚೇರಿಯ ದೂ.08392-267932 ಗೆ ಸಂಪರ್ಕಿಸಬಹುದಾಗಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ