ಸೋಮವಾರ, ಜೂನ್ 19, 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಪ್ರವೇಶ: ಅರ್ಜಿ ಆಹ್ವಾನ ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ (ಪಿ.ಯು.ಸಿ. ಮತ್ತು ಪಿ.ಯು.ಸಿ. ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿ ಕಲ್ಪಿಸಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‍ಲೈನ್‍ನ https://shp.karnataka.gov.in ವೆಬ್‍ಸೈಟ್‍ಗೆ ಭೇಟಿ ನೀಡಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 15 ಆಗಿರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ https://bcwd.karnataka.gov.in ನ್ನು ನೋಡಬಹುದು. ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್‍ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ