ಸೋಮವಾರ, ಜೂನ್ 19, 2023

ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಬಳ್ಳಾರಿ,ಜೂ.19(ಕರ್ನಾಟಕ ವಾರ್ತೆ): 2023-24ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ, ಕುರುಗೋಡು, ಹಾಗೂ ಕಂಪ್ಲಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಪರಿಶಿಷ್ಟ ಜಾತಿ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಆರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ ಮತ್ತು ಪಿ.ಯು.ಸಿ ಸಮನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಮಂಜೂರಾತಿ ಸಂಖ್ಯಾಬಲಕ್ಕೆ ಶೇ.75, ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳÀ ಮತ್ತು ಇತರೆ ಜಾತಿಯ ಶೇ.25 ರಷ್ಟು ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‍ಸೈಟ್ https://shp.karnataka.gov.in ಲಿಂಕ್‍ನಲ್ಲಿ ಅರ್ಜಿ ಸಲ್ಲಿsಸಿ, ಅರ್ಜಿಯ ಸ್ವೀಕೃತಿ ಪ್ರತಿಯೊಂದಿಗೆ ವಿದ್ಯಾರ್ಥಿಯ ದಾಖಲಾತಿಗಳೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರ ಕಚೇರಿ ಅಥವಾ ಸಂಬಂಧಪಟ್ಟ ನಿಲಯದ ವಾರ್ಡನ್‍ರವರಿಗೆ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 16 ರಂದು ಕೊನೆಯ ದಿನ ಆಗಿರುತ್ತದೆ. *ಬೇಕಾದ ದಾಖಲೆಗಳ ವಿವರ: ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ತಂದೆ/ತಾಯಿ ಆಧಾರ ಸಂಖೆ, ಎಸ್.ಎಸ್.ಎಲ್.ಸಿ ಮಾಕ್ರ್ಸ್‍ಕಾರ್ಡ್, ಎಸ್.ಹೆಚ್.ಪಿ. ಸ್ಕಾಲರ್‍ಶಿಪ್ ಸಂಖ್ಯೆ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ಸಂಖ್ಯೆ, ವಿದ್ಯಾರ್ಥಿ ಪೋಟೋ, ಹಿಂದಿನ ವರ್ಷದ ಅಂಕಪಟ್ಟಿಗಳನ್ನು ಲಗತ್ತಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಮೊದಲನೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಷಾಶು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ