ಬುಧವಾರ, ಜೂನ್ 21, 2023

ಬಳ್ಳಾರಿ ಜಿಪಂ ತ್ರೈಮಾಸಿಕ ಕೆಡಿಪಿ ಸಭೆ ಜೂ.27ರಂದು ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ಬಳ್ಳಾರಿ ಜಿಲ್ಲಾ ಪಂಚಾಯಿತಿಯ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಕಿ ಅಂಶ ಸೇರಿದಂತೆ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‍ನ ನಜೀರ್ ಸಭಾಂಗಣದಲ್ಲಿ ಜೂ.27 ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ. ಸದರಿ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಯ ಕಾರ್ಯಕ್ರಮಗಳ (ವಾರ್ಷಿಕ) ಕೆಡಿಪಿ ತ್ರೈಮಾಸಿಕ ಆರ್ಥಿಕ ಮತ್ತು ಭೌತಿಕ ವಿವರಗಳ ಪ್ರಗತಿ ವರದಿಯೊಂದಿಗೆ ಖುದ್ದಾಗಿ ನಿಗದಿಪಡಿಸಿದ ಸಮಯದೊಳಗೆ ಹಾಜರಾಗಬೇಕು ಎಂದು ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ