ಶುಕ್ರವಾರ, ಜೂನ್ 23, 2023
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಜಾಗೃತಿ ಜಾಥಾ ಜೂ.28 ರಂದು
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಜೂ.28 ರಂದು ಬೆಳಗ್ಗೆ 09 ಕ್ಕೆ ನಗರದ ಕೌಲ್‍ಬಜಾರ್‍ನಲ್ಲಿ “ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ” ಅಂಗವಾಗಿ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ನಗರದ ಬ್ರೂಸ್‍ಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೆಂದ್ರ ಕುಮಾರ್ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ