ಗುರುವಾರ, ಜೂನ್ 1, 2023

ವಿಠಲಾಪುರ: ಸರ್ಕಾರಿ ಐ.ಟಿ.ಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): ಸಂಡೂರು ತಾಲ್ಲೂಕಿನ ವಿಠಲಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐ.ಟಿ.ಐ)ಗೆ 2023-24ನೇ ಸಾಲಿಗೆ ವಿವಿಧ ವೃತ್ತಿಗಳು ಎಲೆಕ್ಟ್ರಿಷಿಯನ್ ಹಾಗೂ ಫಿಟ್ಟರ್ ವೃತಿಗಳಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯಲ್ಲಿ ಪಿ.ಪಿ.ಪಿ ಅಡಿಯಲ್ಲಿ ಎಲೆಕ್ಟ್ರಿಷಿಯನ್, ಫಿಟ್ಟರ್ ಹಾಗೂ ಒಂದು ವರ್ಷದ ಕೋಪ ಮತ್ತು ಹತ್ತನೇ ತರಗತಿ ಫೇಲಾದ ಅಭ್ಯರ್ಥಿಗಳಿಗಾಗಿ ಒಂದು ವರ್ಷದ ವೆಲ್ಡರ್ ವೃತ್ತಿಗೆ ಆಫ್‍ಲೈನ್ ಮುಖಾಂತರ ಅರ್ಜಿಯನ್ನು ಪಡೆಯಬಹುದು. ಆಸಕ್ತರು ಅರ್ಜಿಯನ್ನು ಜೂನ್ 09 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಠಲಾಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಅಥವಾ ಮೊ.9632069007, 8660312858 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ತರಬೇತಿ ಅಧಿಕಾರಿ ಕುದರಾತ್ ಆಲಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ