ಬುಧವಾರ, ಜೂನ್ 21, 2023
ವಿವಿಧ ಜಯಂತಿಗಳ ಆಚರಣೆ ನಿಮಿತ್ತ ಪೂರ್ವಭಾವಿ ಸಿದ್ಧತಾ ಸಭೆ
ಜಿಲ್ಲಾಡಳಿತದಿಂದ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರಾ
ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ವಿವಿಧ ಮಹನೀಯರ ಜಯಂತಿಯನ್ನು ಅರ್ಥಪೂರ್ಣವಾಗಿ ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಹೇಳಿದರು.
ವಿವಿಧ ಮಹನೀಯರ ಜಯಂತಿಗಳ ಆಚರಣೆ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜೂ.27 ರಂದು ಕೆಂಪೇಗೌಡ ಜಯಂತಿ, ಜು.02 ರಂದು ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಹಾಗೂ ಜು.03 ರಂದು ಹಡಪದ ಹಪ್ಪಣ್ಣ ಜಯಂತಿಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಬಾಬು ಹಾಗೂ ಎಲ್ಲಾ ಸಮುದಾಯದ ಮುಖಂಡರು ಇದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ