ಶುಕ್ರವಾರ, ಜೂನ್ 30, 2023
ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ಜು.02 ರಂದು ವಿದ್ಯುತ್ ವ್ಯತ್ಯಯ*
ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಹಲಕುಂದಿ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಈ ಉಪಕೇಂದ್ರದಿಂದ ವಿದ್ಯುತ್ ಸರಬರಾಜಾಗುವ 11ಕೆ.ವಿ ಮಾರ್ಗಗಳಲ್ಲಿ ಜುಲೈ 02 ರಂದು ಬೆಳಗ್ಗೆ 08 ರಿಂದ ಸಂಜೆ 06 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಸಹಾಯಕ ಇಂಜಿನಿಯರ್ ಸಂತೋಷಿ ಬಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗಲಿರುವ ಪ್ರದೇಶಗಳಿವು:* ಎಫ್-1 ಫೀಡರ್‍ನ ಯಶಸ್ವಿನಿ ಸ್ಪಾಂಜ್ ಕೈಗಾರಿಕೆ ಪ್ರದೇಶ ಮಾರ್ಗದ ಹುಲುಂದಿ ಗ್ರಾಮ, ಮುಂಡರಿಗಿ ಕೈಗಾರಿಕಾ ಪ್ರದೇಶ. ಎಫ್-2 ಫೀಡರ್‍ನ ಮಿಂಚೇರಿ ಐ.ಪಿ ಮಾರ್ಗದ ಮುಂಡರಗಿ, ಹಲಕುಂದಿ, ಮಿಂಚೇರಿ ಎಸ್.ಜೆ. ಕೋಟೆ ಐ.ಪಿಗಳು. ಎಫ್-4 ಫೀಡರ್‍ನ ಸುಧಾಕರ ಪೈಪ್, ಎಫ್-5 ಫೀಡರ್‍ನ ಅಪೇರಲ್ ಪಾರ್ಕ್, ಎಫ್-6 ಫೀಡರ್‍ನ ಗುರುನಾಥ ರೈಸ್ ಮಿಲ್ ಮಾರ್ಗದ ಮುಂಡರಿಗಿ ಕೈಗಾರಿಕೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ