ಗುರುವಾರ, ಜೂನ್ 1, 2023

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): 2023-24ನೇ ಸಾಲಿಗೆ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿನಿಲಯಗಳಲ್ಲಿ 5ನೇ ತರಗತಿಯಿಂದ 10ನೇ ತರಗತಿವರೆಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ SATS ID ಯೊಂದಿಗೆ ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವಿಳಾಸ https://shp.karnataka.gov.in/ ಇಲ್ಲಿ ಸಂದರ್ಶಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನ ಜೂ.15 ಆಗಿರುತ್ತದೆ. ಷರತ್ತುಗಳು: ವಿದ್ಯಾರ್ಥಿನಿಲಯಕ್ಕೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳನ್ನು ರಾಜ್ಯ ವಿದ್ಯಾರ್ಥಿ ನಿಲಯ ತಂತ್ರಾಂಶದ ವೆಬ್‍ಸೈಟ್ https://shp.karnataka.gov.in/ ನ್ನು ನೋಡಬಹುದು. ವಿದ್ಯಾರ್ಥಿಗಳು 2023-24ನೇ ಸಾಲಿನಲ್ಲಿ ಬೇರೆ ಶಾಲೆಗಳಿಗೆ ಪ್ರವೇಶ ಪಡೆದಿದ್ದರೆ, ಸದರಿ ವಿದ್ಯಾರ್ಥಿಗಳ SATS ID ಯನ್ನು ಪ್ರಸಕ್ತ ಶಾಲೆಯಲ್ಲಿ ಸಂಬಂಧಿಸಿದ ಮಾಹಿತಿಯನ್ನು ಇಂಧೀಕರಿಸಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.08392-275751 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ