ಮಂಗಳವಾರ, ಜೂನ್ 20, 2023

ಕೆಂಪೇಗೌಡ ಜಯಂತಿ, ಡಾ.ಫ.ಗು ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಹಡಪದ ಹಪ್ಪಣ್ಣ ಜಯಂತಿ ಆಚರಣೆ ನಿಮಿತ್ತ ಪೂರ್ವ ಸಿದ್ದತಾ ಸಭೆ ಜೂ.21 ರಂದು* ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಜೂನ್ 27 ರಂದು ಕೆಂಪೇಗೌಡ ಜಯಂತಿ, ಜುಲೈ 02 ರಂದು ಡಾ.ಫ.ಗು ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಮತ್ತು ಜುಲೈ 03 ರಂದು ಹಡಪದ ಹಪ್ಪಣ್ಣ ಜಯಂತಿಯನ್ನು ಆಚರಣೆ ಮಾಡುವ ಸಲುವಾಗಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರ ಅಧ್ಯಕ್ಷತೆಯಲ್ಲಿ ಜೂ.21 ರಂದು ಸಂಜೆ 04 ಕ್ಕೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಪೂರ್ವಸಿದ್ದತಾ ಸಭೆ ಕರೆಯಲಾಗಿದೆ. ಎಲ್ಲಾ ಸಂಘ ಸಂಸ್ಥೆಗಳು, ಎಲ್ಲಾ ಜನಾಂಗದವರು ಆಗಮಿಸಿ ಸಹಕಾರ ಮತ್ತು ಸಲಹೆಗಳನ್ನು ನೀಡುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‍ಬಾಬು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ