ಮಂಗಳವಾರ, ಜೂನ್ 13, 2023
ಕುರುಗೋಡು: ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂ.14 ರಂದು
ಬಳ್ಳಾರಿ,ಜೂ.13(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕುರುಗೋಡು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ‘Social Justice for all End Child Labour’ ಎಂಬ ಘೋಷವಾಕ್ಯದೋದಿಗೆ ಜೂ.14 ರಂದು ಬೆಳಗ್ಗೆ 10.30 ಕ್ಕೆ ಕುರುಗೋಡಿನ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅದೇ ದಿನ ಬೆಳಗ್ಗೆ 09.30 ಕ್ಕೆ ದಿನಾಚರಣೆಯ ಅಂಗವಾಗಿ ಜಾಥಾ ನಡೆಯಲಿದ್ದು, ದೊಡ್ಡ ಬಸವಣ್ಣ ದೇವಸ್ಥಾನದ ಮುಂಭಾಗದಲ್ಲಿ ತಹಶೀಲ್ದಾರ ಗುರುರಾಜ ಅವರು ಜಾಥಾಗೆ ಚಾಲನೆ ನೀಡುವರು.
ನಂತರದ ವೇದಿಕೆ ಕಾರ್ಯಕ್ರಮವನ್ನು ಅಂದು ಬೆಳಗ್ಗೆ 10.30 ಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ ಅವರು ಉದ್ಘಾಟಿಸುವರು.
ಕುರುಗೋಡು ತಹಶೀಲ್ದಾರ ಗುರುರಾಜ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕರಾದ ಮೌನೇಶ್, ಕಾರ್ಮಿಕ ನಿರೀಕ್ಷಕ ಎಂ. ರವಿದಾಸ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ.ನಿರ್ಮಲ, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ರಾಮಚಂದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ವಿಜಯಲಕ್ಷ್ಮಿ, ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಮುಖ್ಯೋಪಾಧ್ಯಾಯರಾದ ಗಾಳಿ ಮಾರುತಿ, ಆರಕ್ಷಕ ವೃತ್ತ ನಿರೀಕ್ಷಕ ಕೆ.ಜಯಪ್ರಕಾಶ್ ಅವರು ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿರಲಿದ್ದಾರೆ.
*ಜಾಥಾ ನಡೆಯುವ ಮಾರ್ಗ:* ದೊಡ್ಡ ಬಸವಣ್ಣ ದೇವಸ್ಥಾನದ ಮುಂಭಾಗದಿಂದ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ವೇದಿಕೆ ಕಾರ್ಯಕ್ರಮದವರೆಗೆ ನಡೆಯಲಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ