ಸೋಮವಾರ, ಜೂನ್ 12, 2023

ಕುಡುತಿನಿ: ಬಯಲು ಮುಕ್ತ ಶೌಚಾಲಯ ಘೋಷಣೆಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ) ಕುಡತಿನಿ ಪಟ್ಟಣವನ್ನು ಕೇಂದ್ರ ಸರ್ಕಾರದ ವಸತಿ ಮತ್ತು ನಗರ ವ್ಯವಹಾರ ಸಚಿವಾಲಯ ಇಲಾಖೆಯ ಸ್ವಚ್ಛ ಭಾರತ ಅಭಿಯಾನದಲ್ಲಿ ಬಯಲು ಶೌಚ ಮುಕ್ತ ಎಂದು ಘೋಷಣೆ ಮಾಡಲಾಗಿದೆ. ಕುಡತಿನಿ ಪಟ್ಟಣವನ್ನು (ಓಡಿಎಫ್+) ODF+ ಎಂದು ಘೋಷಿಸಲು ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳಿದ್ದಲ್ಲಿ ಜೂನ್ 16 ರೊಳಗಾಗಿ ಲಿಖಿತವಾಗಿ ಕುಡುತಿನಿ ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಸಲ್ಲಿಸಬೇಕು ಎಂದು ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ