ಗುರುವಾರ, ಜೂನ್ 15, 2023
ಜೂ.16 ರಂದು ಶಿಶುಕ್ಷು ತರಬೇತಿ ಜಾಗೃತಿ ಕಾರ್ಯಾಗಾರ
ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ):
ಭಾರತ ಸರ್ಕಾರದ ಪ್ರಾಂತೀಯ ನಿರ್ದೇಶನಾಲಯ ಹಾಗೂ ರಾಜ್ಯ ಸರ್ಕಾರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಜೂ.16 ರಂದು ಬೆಳಗ್ಗೆ 10 ಕ್ಕೆ ನಗರದ ರಾವ್ ಬಹದ್ದೂರ್ ವೈ. ಮಹಾಬಲೇಶ್ವರ ತಾಂತ್ರಿಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ಒಂದು ದಿನದ “ಶಿಶುಕ್ಷು ತರಬೇತಿ ಜಾಗೃತಿ ಕಾರ್ಯಾಗಾರ” (Apprenticeship Training Awareness Workshop) ಏರ್ಪಡಿಸಲಾಗಿದೆ.
ಬಳ್ಳಾರಿ, ವಿಜಯನಗರ, ರಾಯಚೂರು, ಕೊಪ್ಪಳ ಜಿಲ್ಲೆಯ ಉದ್ಯಮೆದಾರರು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತೋರಣಗಲ್ಲು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಎಂ.ಸಿ.ಸುರೇಶ್ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ