ಶುಕ್ರವಾರ, ಜೂನ್ 16, 2023

ಯುವಕ ನಾಪತ್ತೆ
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ): ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾಮದ ಕೆ.ಪಾಂಡುರಂಗ ಎನ್ನುವ 20 ವರ್ಷದ ಯುವಕ ಬಳ್ಳಾರಿಯ ಆರ್‍ವೈಎಂಇಸಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಜೂ.14 ರಂದು ಕಾಣೆಯಾಗಿರುವ ಕುರಿತು ಬಳ್ಳಾರಿಯ ಕೌಲ್‍ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಸಹಾಯಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಣೆಯಾದ ಯುವಕನ ಚಹರೆ ಗುರುತು: ಅಂದಾಜು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್, ಕಪ್ಪು, ನೀಲಿ ಬಣ್ಣದ ಡಿಜೈನ್‍ನ ಶರ್ಟ್ ಧರಿಸಿರುತ್ತಾನೆ. ಕನ್ನಡ, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್‍ಬಜಾರ್ ಪೊಲೀಸ್ ಠಾಣೆಯ ದೂ.08392-240731, 24415, ಠಾಣೆಯ ಪಿಐ ಮೊ.9480803047, ಪಿಎಸ್‍ಐ ಮೊ.94808203085 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ