ಶುಕ್ರವಾರ, ಜೂನ್ 9, 2023
ಜೂ.12 ರಿಂದ 19 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು
ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ನಿಷೇಧಾಜ್ಞೆ ಜಾರಿ: ಡಿಸಿ ಮಾಲಪಾಟಿ
ಬಳ್ಳಾರಿ,ಜೂ.09(ಕರ್ನಾಟಕ ವಾರ್ತೆ):
ಜಿಲ್ಲೆಯಲ್ಲಿ ಜೂನ್ 12 ರಿಂದ 19 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸಿ.ಆರ್.ಪಿ.ಸಿ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಒಟ್ಟು 15 ಪರೀಕ್ಷಾ ಕೇಂದ್ರಗಳಲ್ಲಿ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ಪರೀಕ್ಷಾ ಕೇಂದ್ರದ ಸುತ್ತಲೂ ಇರುವ ಜೆರಾಕ್ಸ್ ಕೇಂದ್ರಗಳನ್ನು ಮುಚ್ಚಲು ಆದೇಶಿಸಿದೆ ಹಾಗೂ ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಹಾಗೂ ವ್ಯಕ್ತಿಗಳ ಗುಂಪುಗಳನ್ನು ಪ್ರವೇಶ ನಿಷೇಧಿಸಲಾಗಿದೆ.
ಈ ಆದೇಶವು ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ