ಶುಕ್ರವಾರ, ಜೂನ್ 16, 2023
ನಿಧಿ ಅಪ್ಕೆ ನಿಕಟ್ ಜೂ.27 ರಂದು
ಬಳ್ಳಾರಿ,ಜೂ.16(ಕರ್ನಾಟಕ ವಾರ್ತೆ):
ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯ ಜಿಲ್ಲಾ ಪ್ರಾದೇಶಿಕ ಕಚೇರಿಯ ಉದ್ಯೋಗಿಗಳ ಭವಿಷ್ಯನಿಧಿ ಮತ್ತು ಪಿಂಚಣಿ ಇತ್ಯಾದಿಗಳಿಗೆ ಸಂಬಂಧಿಸಿದ ಕುಂದುಕೊರತೆಗಳನ್ನು ನಿವಾರಿಸಲು ಜೂನ್ 27 ರಂದು ಬೆಳಗ್ಗೆ 9ರಿಂದ ಸಂಜೆ 6 ರವರೆಗೆ ‘ನಿಧಿ ಆಪ್ಕೆ ನಿಕಟ್' ಕಾರ್ಯಕ್ರಮವನ್ನು ಕುರುಗೋಡಿನ ಪುರಸಭೆ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಳ್ಳಾರಿ ಉಪಕ್ಷೇತ್ರಿಯ ಭವಿಷ್ಯನಿಧಿ ಆಯುಕ್ತ ಟಿ.ಎನ್.ನಂದನ್‍ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಕ್ರಮವು ಕಾರ್ಮಿಕರ, ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದುಕೊರತೆ ಪರಿಹಾರ ಮತ್ತು ಮಾಹಿತಿ ವಿನಿಮಯಕ್ಕೆ ಅರಿವು ಮೂಡಿಸುವ ಮತ್ತು ಪ್ರಭಾವ ಬೀರುವ ಕಾರ್ಯಕ್ರಮವಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ:08392-226304ಗೆ ಸಂಪರ್ಕಿಸಬಹುದಾಗಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ