ಗುರುವಾರ, ಜೂನ್ 1, 2023

ಮೆಟ್ರಿಕ್ ಪೂರ್ವ ಬಾಲಕರ/ಬಾಲಕೀಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ ಬಳ್ಳಾರಿ,ಜೂ.01(ಕರ್ನಾಟಕ ವಾರ್ತೆ): ಜಿಲ್ಲೆಯ ಬಳ್ಳಾರಿ, ಕುರುಗೋಡು, ಹಾಗೂ ಕಂಪ್ಲಿ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ 2023-24ನೇ ಶೈಕ್ಷಣಿಕ ಸಾಲಿಗೆ ಪರಿಶಿಷ್ಟ ಜಾತಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ, ಬಾಲಕೀಯರ ವಿದ್ಯಾರ್ಥಿ ನಿಲಯಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 5 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಮಂಜೂರಾತಿ ಸಂಖ್ಯಾಬಲಕ್ಕೆ ಶೇ.75, ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮತ್ತು ಇತರೆ ಜಾತಿಯ ಶೇ.25 ರಷ್ಟು ವಿದ್ಯಾರ್ಥಿಗಳಿಂದ ಪ್ರವೇಶಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ವೆಬ್‍ಸೈಟ್:https://shp.karnataka.gov.in ಲಿಂಕ್‍ನಲ್ಲಿ ಅರ್ಜಿಯನ್ನು ಸಲ್ಲಿsಸಿ ಅರ್ಜಿಯ ಸ್ವೀಕೃತಿ ಪ್ರತಿ ಹಾಗೂ ವಿದ್ಯಾರ್ಥಿಯ ದಾಖಲಾತಿಗಳೊಂದಿಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಸಂಬಂಧಪಟ್ಟ ನಿಲಯದ ವಾರ್ಡನ್ ಅವರಿಗೆ ಸಲ್ಲಿಸಬೇಕು. *ಬೇಕಾಗುವ ದಾಖಲೆಗಳು:* ಸಾಟ್ಸ್ ಸಂಖ್ಯೆ, ಆಧಾರ್ ಸಂಖ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಪೋಟೋ, ಬ್ಯಾಂಕ್ ಖಾತೆ ಸಂಖ್ಯೆ, ಮೊಬೈಲ್ ಸಂಖ್ಯೆ, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿ ಆಧಾರ ಸಂಖ್ಯೆ ಪ್ರತಿ ಸಲ್ಲಿಸಬೇಕು. ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂ.15 ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.08392-244738, ಮೊ.9480843073 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಷಾಶು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ