ಶುಕ್ರವಾರ, ಜೂನ್ 2, 2023

ಜೆಇಇ ಪರೀಕ್ಷೆ ಜೂ.04ರಂದು, ಪರೀಕ್ಷಾ ಕೇಂದ್ರಗಳ ಸುತ್ತ 144 ಸೆಕ್ಷನ್ ಜಾರಿ
ಬಳ್ಳಾರಿ,ಜೂ.02(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ನಗರದ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಇಂಜಿನಿಯರಿAಗ್ ಕಾಲೇಜ್ ಮತ್ತು ಬಳ್ಳಾರಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್‌ಮೆಂಟ್ ಇಂಜಿನಿಯರಿAಗ್ ಕಾಲೇಜ್‌ನಲ್ಲಿ ದೆಹಲಿಯ ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ಜೂ.04 ರಂದು ಬೆಳಗ್ಗೆ 09 ರಿಂದ ಸಂಜೆ 06 ರವರೆಗೆ ಜೆಇಇ-2023 ರ ಪರೀಕ್ಷೆಗಳು ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳ ಸುತ್ತ-ಮುತ್ತ 200 ಮೀಟರ್ ಒಳಗಿನ ಆವರಣವನ್ನು ಸಿಆರ್‌ಪಿಸಿ ಕಲಂ 144 ರ ಮೇರೆಗೆ ನಿರ್ಭಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪವನ್‌ಕುಮಾರ್ ಮಾಲಪಾಟಿ ಅವರು ಆದೇಶಿಸಿದ್ದಾರೆ. ಸದರಿ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ ಹಾಗೂ ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನಲ್ಲಿರುವ ಜೆರಾಕ್ಸ್ ಸೆಂಟರ್‌ಗಳನ್ನು ಮುಚ್ಚುವಂತೆ ಆದೇಶಿಸಿರುತ್ತಾರೆ. ಈ ಆದೇಶವು ಪರೀಕ್ಷಾ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ