ಮಂಗಳವಾರ, ಜೂನ್ 20, 2023

ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ* *ಮಕ್ಕಳ ಹಕ್ಕುಗಳ ರಕ್ಷಣೆಗೆ ಚ್ಯುತಿಯಾಗದಂತೆ ನೋಡಿಕೊಳ್ಳುವ ಮೂಲಕ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಿ: ಶಶಿಧರ್ ಕೋಸಂಬೆ* ಬಳ್ಳಾರಿ,ಜೂ.20(ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಮಕ್ಕಳ ಗುಣಮಟ್ಟ ಆರೋಗ್ಯ, ಅಪೌಷ್ಟಿಕತೆ ನಿವಾರಣೆಗೆ ಒತ್ತು ನೀಡುವುದು ಹಾಗೂ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ನಿರ್ಮೂಲನೆ, ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಸಂಬಂಧಿತ ಮಕ್ಕಳಿಗೆ ನ್ಯಾಯ ಒದಗಿಸುವುದು ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಗೆ ಯಾವುದೇ ರೀತಿಯ ಧಕ್ಕೆಯಾಗದಂತೆ, ಸಂಬಂಧ ಪಟ್ಟ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಅಯೋಗ, ಬೆಂಗಳೂರು ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಮಂಗಳವಾರ ನಡೆದ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಭಾಗೀದಾರರೊಂದಿಗೆ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿ ಅವರು ಮಾತನಾಡಿದರು. ನಗರದ ವಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಅವರು, ಆಸ್ಪತ್ರೆಯ ಕೆಲ ಘಟಕಗಳ ಸ್ವಚ್ಛತೆಯ ಕೊರತೆ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಘಟಕದಲ್ಲಿ ಆಹಾರ ತಯಾರಿಕೆ ಗುಣಮಟ್ಟ ಸಂಬಂಧಿಸಿದಂತೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಹೆರಿಗೆಯಾದ ಸಂದರ್ಭದಲ್ಲಿ ತಾಯಿಗೆ ಗುಣಮಟ್ಟ ಪೌಷ್ಟಿಕ ಆಹಾರ ನೀಡಬೇಕು ಹಾಗೂ ನವಜಾತ ಶಿಶುವಿನ ತೂಕ ಮತ್ತು ಆರೋಗ್ಯವನ್ನು ನೋಡಿಕೊಳ್ಳಬೇಕು. ಎಂದರು. ಶಾಲೆಗಳ ವ್ಯವಸ್ಥೆ ಸುಧಾರಣೆಗೆ ವಿಶೇಷ ಗಮನ ನೀಡಬೇಕು. ಕುಡಿಯುವ ನೀರು, ಶೌಚಾಲಯ, ಸಮರ್ಪಕ ನೀರು ಪೂರೈಕೆ, ಸ್ವಚ್ಛತೆ ಅವಶ್ಯಕ ಮೂಲ ಸೌಕರ್ಯಗಳ ಪೂರೈಕೆಯ ಅವಶ್ಯಕತೆ ಸಂಬಂಧಿಸಿದ ಅಧಿಕಾರಿಗಳು ನಿಗವಹಿಸಬೇಕು ಎಂದು ಹೇಳಿದರು. ಜಿಲ್ಲೆಯಲ್ಲಿ ಪೋಕ್ಸೋ ಕಾಯ್ದೆ ಅಡಿ ದಾಖಲಾದ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ತಕ್ಷಣ ಸಂಬಂದಿಸಿದ ಇಲಾಖೆಗಳು ಸ್ಪಂದಿಸಬೇಕು .ಪೆÇಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಸ್ಪಂದಿಸಬೇಕು. ಇದಕ್ಕೆ ತಪ್ಪಿದ್ದಲ್ಲಿ ಸ್ವ-ಪ್ರೇರಣೆಯಿಂದ (ಸುಮೋಟೋ) ದೂರು ದಾಖಲಿಸಿಕೊಂಡು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು. ಜಿಲ್ಲೆಯಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳು, ವಸತಿ ನಿಲಯಗಳು, ಶಿಶುಪಾಲನ ಕೇಂದ್ರ, ಬಾಲಕ ಮತ್ತು ಬಾಲಕಿಯರ ಬಾಲ ಮಂದಿರಗಳಿಗೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಅವರು, ಅಧಿಕಾರಿಗಳು ಕಾಯ್ದೆ-ಕಾನೂನು, ನಮೂನೆ ಎಲ್ಲವುಗಳನ್ನು ತಿಳಿದು, ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು. ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಸಮರ್ಪಕ ಆಹಾರ ವಿತರಣೆ, ಮೊಟ್ಟೆ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಮೇಲ್ವಿಚಾರಣೆಗೆ ನಿರ್ಲಕ್ಷ್ಯ ತೋರಿದವರಿಗೆ ತಕ್ಷಣ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವಂತೆ ಅವರು ಸೂಚನೆ ನೀಡಿದರು. ಗಣಿ ಪ್ರದೇಶದ ಭಾಗದ ಅಪೌಷ್ಟಿಕ ಮಕ್ಕಳ ಆರೋಗ್ಯ ವೃದ್ಧಿಗೆ ವಿಶೇಷ ಗಮನ ನೀಡಬೇಕು. ಮುಂದಿನ ದಿಗಳಲ್ಲಿ ಸಂಬಂಧ ಪಟ್ಟ ವಿವಿಧ ಇಲಾಖೆಯ ಅಧಿಕಾರಿಗಳು ಜಿಲ್ಲೆಯಾದ್ಯಂತ ಭೇಟಿ ನೀಡಿ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು ಎಂದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯಡಿ ಬರುವ ವಸತಿ ನಿಲಯಗಳ ಅವ್ಯವಸ್ಥೆಯನ್ನು ತಕ್ಷಣ ಸರಿ ಪಡಿಸಬೇಕು. ಗುಣಮಟ್ಟದ ಆಹಾರ ಮತ್ತು ಶುದ್ಧ ಕುಡಿಯುವ ನೀರು, ಹಾಸಿಗೆಗಳ ವ್ಯವಸ್ಥೆ ಸೇರಿದಂತೆ ಅವಶ್ಯಕ ಮೂಲ ಸೌಕರ್ಯಗಳನ್ನು ತಕ್ಷಣ ಕಲ್ಪಿಸಬೇಕು. ಆಯಾ ವಸತಿ ನಿಲಯಗಳಲ್ಲಿ ದೂರು ಪೆಟ್ಟಿಗೆ ಮೇಲು ಉಸ್ತುವಾರಿ ಮಾಡುವ ಬಗ್ಗೆ ಪೆÇಲೀಸ್ ಇಲಾಖೆಯಿಂದ ಸೂಕ್ತ ನಿಗಾ ಇಡಬೇಕು. ಪೋಕ್ಸೋ ಪ್ರಕರಣಗಳು ಹೆಚ್ಚಾಗಿ ಆಗದಂತೆ ನಿಗಾ ವಹಿಸಬೇಕು ಎಂದು ತಿಳಿಸಿದರು. ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಬಸ್‍ಗಳಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗಬಾರದು. ಈ ಕುರಿತು ಕೆಕೆಆರ್‍ಟಿಸಿ ಅಧಿಕಾರಿಗಳು ಸಭೆ ನಡೆಸಬೇಕು. ಹೆಚ್ಚುವರಿ ಬಸ್‍ಗಳನ್ನು ಬಿಡಲು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬಾರದು ಎಂದರು. ನಗರದಲ್ಲಿ ಖಾಸಗಿ ಶಾಲಾ ವಾಹನಗಳು ನಿಗದಿಗಿಂತ ಹೆಚ್ಚಿನ ಮಕ್ಕಳನ್ನು ಸೇರಿಸಿಕೊಳ್ಳಬಾರದು. ಆಟೋ ಮತ್ತು ಖಾಸಗಿ ವಾಹನಗಳಲ್ಲಿ ಮಕ್ಕಳನ್ನು ಸಾಗಿಸುವಂತಿಲ್ಲ ಎಂದು ಹೇಳಿದರು. ವಾರಕ್ಕೊಮ್ಮೆ ಎರಡು ತಾಲೂಕುಗಳಿಗೆ ಭೇಟಿ ನೀಡಿ ಅಲ್ಲಿ ಬಾಲ ಕಾರ್ಮಿಕರನ್ನು ಗುರುತಿಸಿ, ದುಡಿಸಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ದೂರು ದಾಖಲಿಸಬೇಕು ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಸೂಚಿಸಿದರು. ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಸಲು ಸಹಾಯವಾಣಿ ಸಂಖ್ಯೆ 1098 ನ್ನು ದೊಡ್ಡ ಅಕ್ಷರಗಳಲ್ಲಿ ಫಲಕ ಅಥವಾ ಗೋಡೆಗಳ ಮೇಲೆ ನಮೂದಿಸಬೇಕು ಎಂದರು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಮಕ್ಕಳ ಹಕ್ಕುಗಳ ರಕ್ಷಣೆಗಾಗಿ 2005 ರ ಕಾಯ್ದೆ ಹಾಗೂ 2006 ರ ಸಂಖ್ಯೆ 6 ರ ಅಡಿಯಲ್ಲಿ ಸ್ವತಂತ್ರ ಶಾಸನಬದ್ದ ಅಂಗ ಸಂಸ್ಥೆಯಾಗಿದೆ. ಮಕ್ಕಳ ಸವಾರ್ಂಗೀಣ ಅಭಿವೃದ್ಧಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗವು ಸದಾ ಸಿದ್ಧವಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‍ನ ಸಹಾಯಕ ಕಾರ್ಯದರ್ಶಿ ಪ್ರಮೋದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಹೆಚ್.ವಿಜಯಕುಮಾರ್, ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷೆ ವಿಜಯಲಕ್ಷ್ಮೀ ಮೈದೂರು, ಬಾಲ ನ್ಯಾಯ ಮಂಡಳಿಯ ಸದಸ್ಯೆ ಪುಷ್ಪಲತಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ರಾಮಕೃಷ್ಣ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ