ಶುಕ್ರವಾರ, ಜೂನ್ 30, 2023
ಜು.02 ರಂದು ಡಾ.ಫ.ಗು.ಹಳಕಟ್ಟಿ ಜಯಂತಿ*
ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜುಲೈ 02 ರಂದು ಬೆಳಗ್ಗೆ 10 ಕ್ಕೆ ವಚನ ಸಾಹಿತ್ಯದ ಪಿತಾಮಹ ಡಾ.ಫ.ಗು.ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮವು ನಗರದ ಡಾ.ರಾಜ್‍ಕುಮಾರ್ ರಸ್ತೆಯ ಸಾಂಸ್ಕøತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ನಡೆಯಲಿದೆ.
ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ.ನಾಗರಾಜ, ಜೆ.ಎನ್.ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್.ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಡಾ.ನಿಷ್ಠಿ ರುದ್ರಪ್ಪ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಅಪರ ಜಿಲ್ಲಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‍ಬಾಬು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ