ಶನಿವಾರ, ಜೂನ್ 17, 2023
ತಾಯಿ, ಮಗಳು ಕಾಣೆ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ಕೆಂಚನಗುಡ್ಡ ಗ್ರಾಮದ 01 ನೇ ವಾರ್ಡ್‍ನ ತಾಯಮ್ಮ ಗುಡಿ ಹತ್ತಿರ ನಿವಾಸಿಯಾದ ಜ್ಯೋತಿ ಎನ್ನುವ 28 ವರ್ಷದ ತಾಯಿ ಹಾಗೂ ಹುಲಿಗೆಮ್ಮ ಎನ್ನುವ 07 ವರ್ಷದ ಮಗಳು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಯಿ ಜ್ಯೋತಿಯ ಚಹರೆ ಗುರುತು: ಎತ್ತರ 5.4 ಅಡಿ, ಸಾಧಾರಣ ಮೈಕಟ್ಟು, ಕೆಂಪು ಮೈಬಣ್ಣ, ಕೋಲು ಮುಖ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಮೇರುನ್ ರೇಡ್ ಕಲರ್ ಸೀರೆ ಮತ್ತು ಕಪ್ಪು ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.
ಮಗಳು ಹುಲಿಗೆಮ್ಮ ಚಹರೆ ಗುರುತು: ಎತ್ತರ 3.1 ಅಡಿ, ಸಾಧಾರಣ ಮೈಕಟ್ಟು, ಕೆಂಪು ಮೈಬಣ್ಣ, ದುಂಡು ಮುಖ ಹೊಂದಿರುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಪಾಚಿ ಬಣ್ಣದ ಫ್ರಾಕ್ ಧರಿಸಿರುತ್ತಾಳೆ.
ಕಾಣೆಯಾಗಿರುವ ಇಬ್ಬರ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೆÇಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000 ಹಾಗೂ ಬಳ್ಳಾರಿ ಎಸ್.ಪಿ ಅವರ ದೂ.08932-258400 ಗೆ ಸಂಪರ್ಕಿಬಹುದು.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ