ಶನಿವಾರ, ಜೂನ್ 3, 2023
ಜೂ.04 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ):
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್‍ಗಳಾದ ಎಫ್-47 ಫೀಡರ್‍ನ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜೂ.04 ರಂದು ಬೆಳಗ್ಗೆ 10 ರಿಂದ ಸಂಜೆ 06 ರವರೆಗೆ ನಗರದ ಅಂದ್ರಾಳ್ ರಸ್ತೆ, ಕೊಲ್ಮಿ ಚೌಕ್, ಮಿಲ್ಲರಪೇಟೆ, ಬೊಮ್ಮನಾಳ್ ರೋಡ್ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ