ಗುರುವಾರ, ಜೂನ್ 15, 2023
ಜೂ.17 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ*
ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿನ ಮೋಕಾ ಶಾಖೆ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಇತ್ಯರ್ಥಪಡಿಸಲು ಜೂ.17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01.30 ರವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆ ದಾಸರ ನಾಗೇನಹಳ್ಳಿ ಗ್ರಾಮದ ಸಿದ್ದರಾಮೇಶ್ವರ ದೇವಸ್ಥಾನ ಅವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಇಂಜಿನಿಯರ್ ಸಂತೋಷಿ ಭಾಯಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ