ಬುಧವಾರ, ಜೂನ್ 21, 2023
ಯೋಗದಿಂದ ಆರೋಗ್ಯದ ರಕ್ಷಣೆ ಸಾಧ್ಯ: ಪಂಪಾಪತಿ
ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ):
ನಿರಂತರ ಯೋಗ ಮತ್ತು ಪ್ರಾಣಾಯಾಮದಿಂದ ಆರೋಗ್ಯದ ಪರಿಯನ್ನು ರಕ್ಷಿಸಿಕೊಳ್ಳಬಹುದು ಪತಂಜಲಿ ಯೋಗಕೇಂದ್ರದ ಯೋಗ ಪಟು ಪಂಪಾಪತಿ ಅವರು ಹೇಳಿದರು .
ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಗರದ ಬಾಲಭಾರತಿ ಮತ್ತು ವಿವೇಕಾನಂದ ಪ್ರೌಢಶಾಲೆಗಳ ಆವರಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ 09 ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾರಕ ರೋಗಗಳಿಂದ ನಮ್ಮ ದೇಹವನ್ನು ಕಾಪಾಡಿಕೊಳ್ಳಲು ಪ್ರಾಣಾಯಾಮ ಬಹಳ ಉಪಯುಕ್ತ ಎಂದರು.
ಮಹಾನಗರ ಪಾಲಿಕೆ ಸದಸ್ಯ ಸುರೇಖಾ ಮಲ್ಲನಗೌಡ ಅವರು ಮಾತನಾಡಿ, ಯೋಗಾಸನದ ಅಭ್ಯಾಸ ಎಂಬುದು ನಮ್ಮ ಜೀವನದ ಚಟುವಟಿಕೆಗಳಲ್ಲಿ ಒಂದಾದರೆ ಮಾತ್ರ ನಮ್ಮ ಆರೋಗ್ಯವನ್ನು ರಕ್ಷಿಸಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಹೈದರಾಬಾದಿನ ದೂರದರ್ಶನ ಕೇಂದ್ರದ ನಿವೃತ್ತ ಉಪನಿರ್ದೇಶಕ ಡಾ.ಕೆ.ಸುಧಾಕರ್ ರಾವ್ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕೇಂದ್ರ ಸಂವಹನ ಇಲಾಖೆಯ ಕ್ಷೇತ್ರ ಪ್ರಚಾರ ಅಧಿಕಾರಿ ಎನ್.ರಾಮಕೃಷ್ಣ, ಬಾಲ ಭಾರತಿ ಹಾಗೂ ವಿವೇಕಾನಂದ ಪ್ರೌಢಶಾಲೆಯ ಪ್ರಾಂಶುಪಾಲರಾದ ಪಲ್ಲವಿ ಸೇರಿದಂತೆ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಕೇಂದ್ರ ಸಂವಹನ ಇಲಾಖೆಯಿಂದ ಭಾಗವಹಿಸಿದ ಗಣ್ಯರಿಂದ ಬಹುಮಾನ ವಿತರಿಸಲಾಯಿತು .
ಶಾಲಾ ಮಕ್ಕಳಿಂದ ಸೂರ್ಯ ನಮಸ್ಕಾರದ ಪ್ರಾತ್ಯಕ್ಷತೆ ನಡೆಯಿತು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ