ಶುಕ್ರವಾರ, ಜೂನ್ 2, 2023
ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ಸೈಕಲ್ ಜಾಥಾ ಜೂ.03 ರಂದು
ಬಳ್ಳಾರಿ,ಜೂ.02(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾರ್ಯಕ್ರಮ ಕೋಶ, ಭಾರತೀಯ ವೈದ್ಯಕೀಯ ಸಂಘ ಜಿಲ್ಲಾ ಶಾಖೆ ಹಾಗೂ ಜಿಲ್ಲಾ ಸೈಕ್ಲಿಂಗ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬೈಸಿಕಲ್ (World Bicycle Day) ದಿನಾಚರಣೆಯ ಪ್ರಯುಕ್ತ ಜೂ.3ರಂದು ಬೆಳಗ್ಗೆ 06.30 ಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಸೈಕಲ್ ಜಾಥಾದ ಮೂಲಕ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
*ಸೈಕಲ್ ಜಾಥಾ ಮಾರ್ಗ:* ಸೈಕಲ್ ಜಾಥಾವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಿಂದ ಆರಂಭವಾಗಿ ಸಂಗಂ ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮೋತಿ ವೃತ್ತ, ಸುಧಾ ಸರ್ಕಲ್, ಇನ್ ಫ್ಯಾಂಟರಿ ರಸ್ತೆಯ ಮೂಲಕ ಎಸ್‍ಪಿ ವೃತ್ತದ ಮಾರ್ಗವಾಗಿ ದುರ್ಗಮ್ಮ ದೇವಸ್ಥಾನದಿಂದ ಕೋರ್ಟ್ ರಸ್ತೆಯ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣಕ್ಕೆ ಅಂತ್ಯಗೊಳ್ಳಲಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ