ಶನಿವಾರ, ಜೂನ್ 17, 2023
ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಅವರ ಪ್ರವಾಸ ಕಾರ್ಯಕ್ರಮ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ್ ಕೋಸಂಬೆ ಅವರು, ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳು, ಮಕ್ಕಳ ಪಾಲನಾ ಸಂಸ್ಥೆ, ದತ್ತು ಕೇಂದ್ರ, ವಸತಿ ನಿಲಯ, ಜಿಲ್ಲಾ ಆಸ್ಪತ್ರೆಗೆ ಭೇಟಿ ಮತ್ತು ಪರಿಶೀಲನೆ ನಡೆಸಲು ಜೂನ್ 20 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.
ಜೂ.20 ರಂದು ಬೆಳಗ್ಗೆ 08 ರಿಂದ ಮಧ್ಯಾಹ್ನ 01 ರವರೆಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ದತ್ತು ಕೇಂದ್ರ, ಮಕ್ಕಳ ಪಾಲನಾ ಸಂಸ್ಥೆ ಮತ್ತು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡುವರು.
ಮಧ್ಯಾಹ್ನ 03 ರಿಂದ ಸಂಜೆ 04.30 ರವರೆಗೆ ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ವಿವಿಧ ಇಲಾಖೆಗಳ ಭಾಗೀಧಾರರೊಂದಿಗೆ ಸಮಾಲೋಚನಾ ಸಭೆ ನಡೆಸುವರು.
ಸಂಜೆ 04.30 ರಿಂದ 05 ರವರೆಗೆ ಪತ್ರಿಕಾಗೋಷ್ಠಿ ನಡೆಸುವರು.
ಅಂದು ಸಂಜೆ 07 ಕ್ಕೆ ಬಳ್ಳಾರಿಯಿಂದ ಧರ್ಮಾವರಂಗೆ ಕಾರ್ ಮೂಲಕ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ