ಸೋಮವಾರ, ಜೂನ್ 12, 2023

ಕುವೈತ್ ನ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಹುದ್ದೆ ಖಾಲಿ: ನೋಂದಣಿಗೆ ಆಹ್ವಾನ ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ) ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದಿಂದ ಕುವೈತ್ ನ ಬೆಂಗಳೂರು ಅಸೋಶಿಯೇಶನ್ ನಲ್ಲಿ ಅಭ್ಯರ್ಥಿಗಳು ಬೇಕಾಗಿದ್ದು, ಅರ್ಹ ಅಭ್ಯರ್ಥಿಗಳು ನೊಂದಣಿಗೆ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಸ್.ಬಸವರಾಜಪ್ಪ ಅವರು ತಿಳಿಸಿದ್ದಾರೆ. ಅರ್ಹತೆ: ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಡಿಪೆÇ್ಲೀಮಾ ಉತ್ತಿರ್ಣ ಅಥವಾ ಅನುತ್ತೀರ್ಣರಾದವರು ನೊಂದಣಿ ಮಾಡಿಕೊಳ್ಳಬಹುದು. ಜೂನ್ 15 ರಂದು ನೇರ ಸಂದರ್ಶನ ನಡೆಯಲಿದೆ. ವೇತನ: (ಪ್ರತಿ ತಿಂಗಳಿಗೆ) 13ಸಾವಿರ ದಿಂದ 16 ಸಾವಿರದವರೆಗೆ ಇರುತ್ತದೆ. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಸಮಾನ ಅವಕಾಶವಿದ್ದು, ಊಟ ಮತ್ತು ವಸತಿ ಸೌಲಭ್ಯ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಗರದ ಅನಂತಪುರ ರಸ್ತೆಯ ಹೊಸ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಅಥವಾ ಮೊ.8073852104, 9964502514 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ