ಗುರುವಾರ, ಜೂನ್ 15, 2023

ಸಿರುಗುಪ್ಪ: ಜೂ.17 ರಂದು ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ* ಬಳ್ಳಾರಿ,ಜೂ.15(ಕರ್ನಾಟಕ ವಾರ್ತೆ): ಸಿರುಗುಪ್ಪ ಜೆಸ್ಕಾಂ ಉಪವಿಭಾಗದ ಸಿರಿಗೇರಿ ಕ್ರಾಸ್ ಶಾಖಾ ಕಚೇರಿಯಲ್ಲಿ ಜೂ.17 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜೆಸ್ಕಾಂ ಗ್ರಾಹಕರ ಕುಂದು ಕೊರತೆ ಸಭೆ ಏರ್ಪಡಿಸಲಾಗಿದೆ. ಸಭೆಯಲ್ಲಿ ಕಾರ್ಯ ಮತ್ತು ಪಾಲನೆ ಉಪವಿಭಾಗ ಜೆಸ್ಕಾಂ ಸಿರುಗುಪ್ಪ ವ್ಯಾಪ್ತಿಗೆ ಸಂಬಂಧಿಸಿದಂತೆ ಸಮಸ್ಯೆ ಇರುವಂತಹ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಬಹುದಾಗಿದೆ ಎಂದು ಸಿರುಗುಪ್ಪ ಜೆಸ್ಕಾಂನ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ