ಬುಧವಾರ, ಜೂನ್ 14, 2023
ವಿದ್ಯಾರ್ಥಿ ಬಸ್ ಪಾಸ್; ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ
ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ): ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದಿಂದ 2023-24ನೇ ಸಾಲಿನ ವಿದ್ಯಾರ್ಥಿ ಉಚಿತ ಬಸ್ ಪಾಸ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಅವರು ತಿಳಿಸಿದ್ದಾರೆ.
ಬಸ್‍ಪಾಸ್ ಪಡೆಯಲು ಬಯಸುವ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhuseಡಿviಛಿes.ಞಚಿಡಿಟಿಚಿಣಚಿಞಚಿ.gov.iಟಿ ಅಥವಾ ಕರ್ನಾಟಕ ಒನ್, ಗ್ರಾಮ-ಒನ್ ಕೇಂದ್ರಗಳಲ್ಲಿ 30ರೂ. ಸೇವಾ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್‍ಗೆ ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಯುಪಿಐ ಮೂಲಕ ಪಾವತಿಸಿ ಪಾಸನ್ನು ಪಡೆಯಬಹುದಾಗಿದೆ.
ರಾಜ್ಯದಲ್ಲಿ ವಾಸವಿದ್ದು ನೆರೆರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಸಹ ಸೇವಾಸಿಂಧು ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಬೇಕಿರುತ್ತದೆ.
ಶೈಕ್ಷಣಿಕ ಸಂಸ್ಥೆಯಿಂದ ವಾಸ ಸ್ಥಳಕ್ಕೆ 60 ಕಿ.ಮೀ ಗರಿಷ್ಟ ಅಂತರವಿರುವ ವಿದ್ಯಾರ್ಥಿಗಳು ಮಾತ್ರ ಈ ಸೌಲಭ್ಯಕ್ಕೆ ಅರ್ಹರಿರುತ್ತಾರೆ.
ವಿಭಾಗದ ವ್ಯಾಪ್ತಿಯಲ್ಲಿ ಬರುವ ಬಳ್ಳಾರಿ ನಗರದದಲ್ಲಿ 3 ಸೇರಿದಂತೆ ಸಿರುಗುಪ್ಪ, ಕುರುಗೋಡ, ಕಂಪ್ಲಿ ಹಾಗೂ ಸಂಡೂರು ತಾಲ್ಲೂಕಿನಲ್ಲಿ ತಲಾ 1 ಸೇರಿದಂತೆ ಒಟ್ಟು 7 ಪಾಸ್ ವಿತರಣಾ ಕೇಂದ್ರಗಳಿವೆ.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ದೂರುಗಳಿಗೆ ಸಂಬಂಧಿಸಿದಂತೆ ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಮೊ. 9481308202, ನಗರ ಬಸ್ ನಿಲ್ದಾಣ ಮೊ. 9880506472, ರಾಯಲ್ ವೃತ್ತದ ಹತ್ತಿರದ ಕಾರ್ಪೋರೇಷನ್ ಅಫೀಸ್ ಕೆ-1 ಕೇಂದ್ರ ಮೊ. 8095042273, ಎಸ್.ಬಿ.ಐ ಬ್ಯಾಂಕ್ ಹತ್ತಿರ, ಸಿರುಗುಪ್ಪ ಮೊ. 9900715177, ಕುರುಗೊಡು ಬಸ್ ನಿಲ್ದಾಣ ಮೊ. 9900550692, ಕೆ-1 ಕೇಂದ್ರ ಕುರುಗೋಡು ರಸ್ತೆ, ಕಂಪ್ಲಿ ಮೊ. 8151043485, ಸಂಡೂರು ಬಸ್ ನಿಲ್ದಾಣ, ಸಂಡೂರು ಮೊ. 9740293042 ಗೆ ಸಂಪರ್ಕಿಸಬಹುದು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ