ಶುಕ್ರವಾರ, ಜೂನ್ 30, 2023
ಗ್ರಾಹಕರ ಸಂರಕ್ಷಣಾ ಕಾಯ್ದೆ: ಸಂವಾದಿತ ಕಾರ್ಯಕ್ರಮ ಪ್ರಸಾರ ಜು.02 ರಂದು*
ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ):
ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು “ಗ್ರಾಹಕ ಸಂರಕ್ಷಣಾ ಕಾಯ್ದೆ 2019”ರ ಪರಿಧಿಗೆ ಒಳಪಡುವ ಗ್ರಾಹಕರಲ್ಲಿ ಅರಿವು ಮೂಡಿಸುವ ಸಲುವಾಗಿ ರಿಜಿಸ್ಟ್ರಾರ್ ಹಾಗೂ ಆಡಳಿತಾಧಿಕಾರಿ ವಿಜಯಕುಮಾರ್ ಅವರು ಸಂವಾದ ನಡೆಸಿರುವ ಬಗ್ಗೆ ದೂರದರ್ಶನ ಚಂದನವಾಹಿನಿಯಲ್ಲಿ ಜುಲೈ 02 ರಂದು ಸಂಜೆ 6 ರಿಂದ 6.30 ವರೆಗೆ ಪ್ರಸಾರ ಮಾಡಲಾಗುತ್ತಿದ್ದು, ಪಕ್ಷಕಾರರು, ವಕೀಲರು ಹಾಗೂ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟ್ರಾರ್ ಮತ್ತು ಸಹಾಯಕ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.
-----
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ