ಶುಕ್ರವಾರ, ಜೂನ್ 30, 2023
ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಜು.03 ರಂದು*
ಬಳ್ಳಾರಿ,ಜೂ.30(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮವು ಜುಲೈ 03 ರಂದು ಬೆಳಗ್ಗೆ 11 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ನಡೆಯಲಿದೆ.
ಅದೇ ದಿನದಂದು ಬೆಳಗ್ಗೆ 09 ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿ ಯುವಜನ ಸೇವಾ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಶಿವಶರಣ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಮೆರವಣಿಗೆಗೆ ಚಾಲನೆ ನೀಡುವರು. ನಂತರ ಬೆಳಗ್ಗೆ 11 ಕ್ಕೆ ವೇದಿಕೆ ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ಎಂ.ನಾಗರಾಜ, ಜೆ.ಎನ್.ಗಣೇಶ್, ಎಂಎಲ್‍ಸಿಗಳಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್.ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಮೇಯರ್ ಡಿ.ತ್ರಿವೇಣಿ ಹಾಗೂ ಇತರರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೆ.ಬಿ.ಸಿದ್ದಲಿಂಗಪ್ಪ ಅವರು ಜಯಂತ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ನೀಡುವರು.
ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್‍ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು, ಮಹಾನಗರ ಪಾಲಿಕೆ ಆಯುಕ್ತ ಎಸ್.ಎನ್.ರುದ್ರೇಶ್, ಅಪರ ಜಿಲ್ಲಾಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ಉಪಸ್ಥಿತರಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್‍ಬಾಬು ಅವರು ತಿಳಿಸಿದ್ದಾರೆ.
ಮೆರವಣಿಗೆ ಮಾರ್ಗ: ನಗರದ ಹೆಚ್.ಆರ್.ಗವಿಯಪ್ಪ ವೃತ್ತದಿಂದ ಆರಂಭವಾಗಿ ರೈಲ್ವೇ ನಿಲ್ದಾಣ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣಕ್ಕೆ ಮುಕ್ತಾಯವಾಗಲಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ