ಶನಿವಾರ, ಜೂನ್ 3, 2023

ಜೂ.04 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಫೀಡರ್‍ಗಳಾದ ಎಫ್-25 ಮತ್ತು ಎಫ್-46 ಫೀಡರಗಳ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಜೂ.04 ರಂದು ಬೆಳಗ್ಗೆ 10 ರಿಂದ ಸಂಜೆ 06 ರವರೆಗೆ ನಗರದ ಕಾರ್ಕಲ ತೋಟ, ಹನುಮಾನ್ ನಗರ, ಪಾತ್ರಬೂದಿಹಾಳ್, ರಾಣಿತೋಟ, ಮರಿಸ್ವಾಮಿ ಮಠ, ದೊಡ್ಡ ಮಾರ್ಕೆಟ್, ಇಂಡಸ್ಟ್ರಿಯಲ್ ಏರಿಯಾ ಹಂತ-1 ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂನ ಉಪವಿಭಾಗ-1 ರ ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ