ಬುಧವಾರ, ಜೂನ್ 21, 2023

ವ್ಯಕ್ತಿ ಕಾಣೆ
ಬಳ್ಳಾರಿ,ಜೂ.21(ಕರ್ನಾಟಕ ವಾರ್ತೆ): ನಗರದ ಎಪಿಎಂಸಿಯ ಟಿ.ಜಿ. ಆಯಿಲ್ ಮಿಲ್ ಮಾರೆಮ್ಮ ಗುಡಿ ಹತ್ತಿರದ ಚೆಲುವಾದಿ ಕೇರಿಯ ನಿವಾಸಿಯಾದ ಬಿ.ಸುರೇಶಬಾಬು ಎನ್ನುವ 32 ವರ್ಷದ ವ್ಯಕ್ತಿ ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿ ರಂಗನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಣೆಯಾದ ವ್ಯಕ್ತಿಯ ಚಹರೆ ಗುರುತು: ಎತ್ತರ 5.1 ಅಡಿ, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ತೆಳ್ಳನೆ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಕಪ್ಪು ಕೂದಲು ಇರುತ್ತವೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಗೆರೆಗಳಿರುವ ತುಂಬು ತೋಳಿನ ಚೆಕ್‍ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಎಪಿಎಂಸಿ ಪೆÇಲೀಸ್ ಠಾಣೆಯ ದೂ.08392-250033, ಮೊ.948080396 ಹಾಗೂ ಬಳ್ಳಾರಿ ಪೆÇಲೀಸ್ ಕಂಟ್ರೋಲ್ ರೂಂ ದೂ.08392-258100ಗೆ ಸಂಪರ್ಕಿಬಹುದು ಎಂದು ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ