ಸೋಮವಾರ, ಜೂನ್ 12, 2023
ಜೂ.15 ರಂದು ಸಿರುಗುಪ್ಪನಲ್ಲಿ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ
ಬಳ್ಳಾರಿ,ಜೂ.12(ಕರ್ನಾಟಕ ವಾರ್ತೆ)
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಸಿರುಗುಪ್ಪ ತಾಲ್ಲೂಕಿನಲ್ಲಿ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆಯನ್ನು ಜೂನ್ 15 ರಂದು ಬೆಳಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪ ತಹಶೀಲ್ದಾರರ ಕಚೇರಿಯಲ್ಲಿರುವ ಸಭಾಂಗಣದಲ್ಲಿ ಸಭಾಂಗಣದಲ್ಲಿ ನಡೆಯಲಿದೆ.
ಸಿರುಗುಪ್ಪ ತಾಲ್ಲೂಕು ವ್ಯಾಪ್ತಿಯ ಸಾರ್ವಜನಿಕರು ಯಾರಿಗಾದರೂ ಸರ್ಕಾರಿ ಅಧಿಕಾರಿಗಳಿಂದ ತಮಗೆ ಆಗಬೇಕಾದ ಕೆಲಸಗಳಲ್ಲಿ ವಿಳಂಬವಾಗಿದ್ದರೆ ಅಥವಾ ಅಧಿಕಾರಿಗಳು ನ್ಯಾಯಯುತವಾಗಿ ಮಾಡಿ ಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದರೆ ಅಥವಾ ಲಂಚ ಕೇಳುವುದು ಇತ್ಯಾದಿ ದುರಾಡಳಿತದಲ್ಲಿ ತೊಡಗಿದ್ದರೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲು ಸ್ವೀಕರಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ಕುಂದುಕೊರತೆಗಳನ್ನು ನೇರವಾಗಿ ಬಂದು ಸಲ್ಲಿಸಲು ಹಾಗೂ ಸ್ಥಳದಲ್ಲಿಯೇ ಇದ್ದ ಅಧಿಕಾರಿಗಳೊಂದಿಗೆ ವಿಚಾರಿಸಲಾಗುತ್ತದೆ.
ಸ್ಥಳದಲ್ಲಿಯೇ ದೂರು ಅರ್ಜಿಯ ಫಾರಂ ನಂ:01 & 02 ತೆಗೆದುಕೊಂಡು ದೂರು ನೀಡಲು ಅನುಕೂಲ ಕಲ್ಪಿಸಲಾಗಿದೆ.
ಸಾರ್ವಜನಿಕರು ಈ ಸಭೆಯ ಉಪಯೋಗ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ