ಶನಿವಾರ, ಜೂನ್ 17, 2023
ಯುವಕ ಕಾಣೆ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೆÇಲೀಸ್ ಠಾಣೆಯ ವ್ಯಾಪ್ತಿಯ ಹಾಗಲೂರು ಗ್ರಾಮದ 01 ನೇ ವಾರ್ಡ್‍ನ ನಿವಾಸಿಯಾದ ಬಸವರಾಜರೆಡ್ಡಿ ಎನ್ನುವ 28 ವರ್ಷದ ಯುವಕ ಕಾಣೆಯಾಗಿರುವ ಕುರಿತು ಸಿರಿಗೇರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣೆಯ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಯುವಕ ಚಹರೆ ಗುರುತು: ಎತ್ತರ 5.6 ಅಡಿ, ದುಂಡುಮುಖ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ ಹೊಂದಿರುತ್ತಾನೆ.
ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಮತ್ತು ತಿಳಿನೀಲಿ ಬಣ್ಣದ ತುಂಬುತೋಳಿನ ಅಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.
ಕಾಣೆಯಾದ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ಸಿರಿಗೇರಿ ಪೆÇಲೀಸ್ ಠಾಣೆಯ ದೂ.08396-244426, 9480803056 ಹಾಗೂ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ದೂ.08396-258100 ಗೆ ಸಂಪರ್ಕಿಸಬಹುದು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ