ಶುಕ್ರವಾರ, ಜೂನ್ 23, 2023
ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜೂ.23(ಕರ್ನಾಟಕ ವಾರ್ತೆ):
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2022-23 ನೇ ಸಾಲಿನ ಪ್ರತಿಭಾವಂತ ಮಾಧ್ಯಮಿಕ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಅರ್ಹ ಕ್ರೀಡಾಪಟುಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಅಂಜಿನಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳಿಗೆ ಪ್ರೊತ್ಸಾಹಿಸುವ ಸಲುವಾಗಿ ಮಾಧ್ಯಮಿಕ/ಪ್ರೌಢಶಾಲಾ (6 ನೇ ರಿಂದ 10 ನೇ ತರಗತಿ) ಕ್ರೀಡಾಪಟುಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ http://sevasindhuservices.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31 ಆಗಿರುತ್ತದೆ.
*ನಿಬಂಧನೆಗಳು:*
ಅರ್ಜಿದಾರರು 2022-23ನೇ ಸಾಲಿನ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ ಅಥವಾ ಪ್ರೌಢಶಾಲಾ (6ನೇ ರಿಂದ 10 ನೇ ತರಗತಿಯಲ್ಲಿ) ಓದುತ್ತಿರಬೇಕು. ಅರ್ಜಿದಾರರು ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತವಾದ ಕ್ರೀಡಾ ಸಂಸ್ಥೆಗಳು 01.04.2022 ರಿಂದ 31.03.2023 ರವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು. ಭಾರತ ಸರ್ಕಾರ ದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟಗಳಲ್ಲಿ ಭಾಗವಹಿಸಿರಬೇಕು. 01.04.2022 ರಿಂದ 31.03.2023 ಅವಧಿಯಲ್ಲಿ ನಡೆದ ಕ್ರೀಡಾ ಕೂಟಗಳನ್ನು ಮಾತ್ರ ಸಾಧನೆಗಳನ್ನು ಎಂದು ಪರಿಗಣಿಸಲಾಗುತ್ತದೆ. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ರಾಷ್ಟ್ರೀಯ ಶಾಲಾ ಕ್ರೀಡಾ ಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು. ಒಬ್ಬ ಕ್ರೀಡಾಪಟು ಒಂದಕ್ಕಿಂತ ಹೆಚ್ಚು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಸಹ ವಾರ್ಷಿಕ ಒಂದೇ ವಿದ್ಯಾರ್ಥಿ ವೇತನವನ್ನು ಮೊತ್ತಕ್ಕೆ ಮಾತ್ರ ಅರ್ಹರಿರುತ್ತಾರೆ. ವಿದ್ಯಾರ್ಥಿ ವೇತನ ಮೊತ್ತವನ್ನು ವಾರ್ಷಿಕ ರೂ.10,000 ಗಳನ್ನು ಮಾತ್ರ ಮಂಜೂರು ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ