ಬುಧವಾರ, ಜೂನ್ 14, 2023
ಅನಾಮಧೇಮ ಮೃತ ವ್ಯಕ್ತಿಯ ಶವ; ವಾರಸುದಾರರ ಪತ್ತೆಗಾಗಿ ಮನವಿ
ಬಳ್ಳಾರಿ,ಜೂ.14(ಕರ್ನಾಟಕ ವಾರ್ತೆ):
ನಗರದ ವಿಮ್ಸ್ ಅಸ್ವತ್ರೆಯ ಮುಂದುಗಡೆ ಸುಮಾರು 35 ರಿಂದ 40 ವರ್ಷದ ಅನಾಮಧೇಯ ವ್ಯಕ್ತಿಯು ಜೂ.12 ರಂದು ಮೃತಪಟ್ಟಿದ್ದು, ಮೃತನ ವಾರಸುದಾರರ ಪತ್ತೆಗಾಗಿ ಕೌಲ್ ಬಜಾರ್ ಪೆÇಲೀಸ್ ಠಾಣೆಯ ಸಹಾಯಕ ಸಬ್‍ಇನ್ಸ್‍ಪೆಕ್ಟರ್ ಪ್ರಕಟಣೆ ಹೊರಡಿಸಿದ್ದಾರೆ.
ಚಹರೆ ಗುರುತು: ಎತ್ತರ ಅಂದಾಜು 5.6 ಅಡಿ, ತೆಳುವಾದ ಮೈಕಟ್ಟು, ಕೋಲು ಮುಖ, ಗೋಧಿ ಮೈಬಣ್ಣ, ತಲೆಯಲ್ಲಿ ಕಪ್ಪು ಕೂದಲು ಹೊಂದಿರುತ್ತಾನೆ.
ಮೈಮೇಲಿನ ಬಟ್ಟೆಗಳು: ಬಿಳಿ ಮತ್ತು ಕಪ್ಪು ಗೆರೆಗಳುಳ್ಳ ಸಿಮೆಂಟ್ ಬಣ್ಣದ ಟಿ-ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ತೊಟ್ಟಿರುತ್ತಾನೆ.
ಅನಾಮಧೇಯ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಕೌಲ್ ಬಜಾರ್ ಪೆÇಲೀಸ್ ಠಾಣೆಯ ದೂ.08392-240731, ಪಿ.ಐ ಮೊ.9480803047, ಪಿ.ಎಸ್.ಐ ಮೊ.9480803084 ಹಾಗೂ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ