ಶನಿವಾರ, ಜೂನ್ 17, 2023
ಜಿಲ್ಲಾ ಮಕ್ಕಳ ರಕ್ಷಣಾ ಘಟಕ: ಜೂ.20 ರಂದು ಸಮಾಲೋಚನಾ ಸಭೆ
ಬಳ್ಳಾರಿ,ಜೂ.17(ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯರಾದ ಶಶಿಧರ್ ಕೊಸಂಬೆ ಅವರು ಜಿಲ್ಲೆಯಲ್ಲಿ ಮಕ್ಕಳ ರಕ್ಷಣಾ ವ್ಯವಸ್ಥೆಯ ಕುರಿತು ಸಹಭಾಗೀದರ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆಯು ಜೂ.20 ರಂದು ಮಧ್ಯಾಹ್ನ 03 ಕ್ಕೆ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ನಡೆಸುವರು.
ಸಂಬಂಧಿಸಿದ ಅಧಿಕಾರಿಗಳು ತಮ್ಮ ಇಲಾಖೆಯಿಂದ ಮಕ್ಕಳಿಗೆ ಸಂಬಂಧಪಟ್ಟ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಕೈಗೊಂಡಿರುವ ಕಾರ್ಯಚಟುವಟಿಕೆಗಳ ಬಗ್ಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗುವಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ಅವರು ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ