ಶನಿವಾರ, ಜೂನ್ 3, 2023

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆÉ ತರಬೇತಿ ಪ್ರಾರಂಭ: ನೊಂದಣಿಗೆ ಅವಕಾಶ ಬಳ್ಳಾರಿ,ಜೂ.03(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಯಿಂದ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಜೂನ್ 08 ರಿಂದ ಪ್ರಾರಂಭಿಸಲಾಗುತ್ತಿದೆ. ಆಸಕ್ತರು ಜೂ.07 ರೊಳಗಾಗಿ ಬೆಳಗ್ಗೆ 10 ರಿಂದ ಸಂಜೆ 05 ರವರೆಗೆ ಮೈಸೂರಿನಲ್ಲಿರುವ ಕೇಂದ್ರ ಕಚೇರಿಗೆ ಬಂದು ತಮ್ಮ ಹೆಸರನ್ನು ನೊಂದಾಯಿಸಿ ತರಬೇತಿ ಪಡೆಯಬಹುದು ಎಂದು ಕರಾಮುವಿಯ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ದೂ.0821-2515944 ಹಾಗೂ ಮೊ.9964760090 ಗೆ ಸಂಪರ್ಕಿಸಬಹುದಾಗಿದೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ