ಗುರುವಾರ, ಜುಲೈ 27, 2023

ಆ.01 ರಂದು ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆ

ಬಳ್ಳಾರಿ,ಜು.27(ಕರ್ನಾಟಕ ವಾರ್ತೆ): ಬಳ್ಳಾರಿ ಗ್ರಾಮೀಣ ಜೆಸ್ಕಾಂ ವಿಭಾಗದ ವ್ಯಾಪ್ತಿಗೆ ಬರುವ ಬಳ್ಳಾರಿ ಗ್ರಾಮೀಣ, ಕುರುಗೋಡು, ಸಂಡೂರು ಮತ್ತು ಸಿರುಗುಪ್ಪ ತಾಲೂಕುಗಳ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರ ಕುಂದು ಕೊರತೆ ಸಭೆಯು ಆಗಸ್ಟ್ 01 ರಂದು ಬೆಳಗ್ಗೆ 11 ಕ್ಕೆ ನಗರದ ಮೋಕಾ ರಸ್ತೆಯ ಗಾಂಧಿನಗರದ ಜೆಸ್ಕಾಂ ಗ್ರಾಮೀಣ ವಿಭಾಗದ ಕಾರ್ಯ ಮತ್ತು ಪಾಲನೆ ಕಚೇರಿ ಮೊದಲನೇ ಮಹಡಿಯ ಎಫ್-06 ಕಾರ್ಯನಿರ್ವಾಹಕ ಅಭಿಯಂತರರ ಕೊಠಡಿಯಲ್ಲಿ ನಡೆಯಲಿದೆ. ಸಂಬಂಧಿತ ತಾಲೂಕುಗಳ ಎಲ್ಲಾ ಹೆಚ್.ಟಿ ಮತ್ತು ಇ.ಹೆಚ್.ಟಿ ವಿದ್ಯುತ್ ಗ್ರಾಹಕರು ಸಭೆಯಲ್ಲಿ ಪಾಲ್ಗೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂ ಕಾರ್ಯ ಮತ್ತು ಪಾಲನ ಕಾರ್ಯನಿರ್ವಾಹಕ ಅಭಿಯಂತರರಾದ ರಂಗನಾಥ ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ