ಶನಿವಾರ, ಜುಲೈ 1, 2023

ಬಳ್ಳಾರಿ ನಗರದಲ್ಲಿ ವಿವಿಧೆಡೆ ದಾಳಿ: 04 ಬಾಲಕಾರ್ಮಿಕರ ರಕ್ಷಣೆ ಬಳ್ಳಾರಿ,ಜು.01(ಕರ್ನಾಟಕ ವಾರ್ತೆ): ನಗರದ ಕಾಳಮ್ಮ ರಸ್ತೆ, ರಾಧಿಕಾ ಮಂದಿರ ರಸ್ತೆ, ಕೊಲ್ಮಿ ಚೌಕ್ ಸ್ಥಳಗಳಲ್ಲಿ ಆಕಸ್ಮಿಕ ದಾಳಿ ನಡೆಸಿ 04 ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ. ರಾಷ್ಟ್ರೀಯ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಬಚಪನ್ ಬಚಾವೋ ಆದೋಲನ, ಪೊಲೀಸ್ ಇಲಾಖೆ,ˌಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ, ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಕಾರ್ಮಿಕ ನಿರೀಕ್ಷಕ ರವಿದಾಸ್ ಹಾಗೂ ಬೆಂಗಳೂರು ಬಚಪನ್ ಬಚಾವೋ ಆದೋಲನ ರಾಜ್ಯ ಸಮನ್ವಯಾಧಿಕಾರಿ ಬೀನು ವರ್ಗೀಸ, ತಂಬಾಕು ನಿಯಂತ್ರಣ ಕೋಶ ಮತ್ತು ಇತರ ಅಧಿಕಾರಿಗಳ ನೇತೃತ್ವದಲ್ಲಿ ನಗರದ ವಿವಿಧೆಡೆ ಗ್ಯಾರೇಜ್, ಬೇಕರಿ, ಶಾಮಿಯಾನ ಸಪ್ಲೆಯರ್ಸ್, ಮೆಕ್ಯಾನಿಕ್ ಶಾಪ್ ಇತ್ಯಾದಿ ಅಂಗಡಿ ಉದ್ದಿಮೆಗಳ ಮೇಲೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿμÉೀದ ಮತ್ತು ನಿಯಂತ್ರಣ) 1986 ಕಾಯ್ದೆ ಉಲ್ಲಂಘನೆ ಮಾಡಿದ ಉದ್ದಿಮೆಗಳ ಮೇಲೆ ಆಕಸ್ಮಿಕ ದಾಳಿ ನಡೆಸಿ 04 ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಿ ಸಂಬಂಧಿಸಿದ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ರಕ್ಷಣೆ ಮಾಡಲಾದ ಬಾಲಕಾರ್ಮಿಕ ಮಕ್ಕಳನ್ನು ಪೋಷಕರಿಗೆ ಒಪ್ಪಿಸಲಾಯಿತು ಎಂದು ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ ಅವರು ತಿಳಿಸಿದ್ದಾರೆ. ----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ