ಸೋಮವಾರ, ಜುಲೈ 10, 2023
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವ ವಿದ್ಯಾಲಯದ 11 ನೇ ಘಟಿಕೋತ್ಸವ ಜು.13ರಂದು
ಬಳ್ಳಾರಿ,ಜು.10(ಕರ್ನಾಟಕ ವಾರ್ತೆ):
ಬಳ್ಳಾರಿ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವವು ವಿಶ್ವ ವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಜುಲೈ 13 ರಂದು ಬೆಳಗ್ಗೆ 10 ಕ್ಕೆ ಜರುಗಲಿದೆ.
ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‍ಚಂದ್ ಗೆಹ್ಲೋಟ್ ಅವರು ಅಧ್ಯಕ್ಷತೆ ವಹಿಸುವರು.
ಈ ಸಮಾರಂಭದಲ್ಲಿ ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್‍ನ ಅಧ್ಯಕ್ಷರಾದ ಡಾ.ಜೆ.ಕೆ.ಬಜಾಜ್ ಅವರು ಘಟಿಕೋತ್ಸವ ಭಾಷಣ ಮಾಡುವರು.
ಸಮಾರಂಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವರು ಹಾಗೂ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಮ ಕುಲಾಧಿಪತಿಗಳಾದ ಡಾ.ಎಂ.ಸಿ.ಸುಧಾಕರ್, ವಿಶ್ವವಿದ್ಯಾಲಯದ ಕುಲಪತಿಗಳಾದ ಪೆÇ್ರ.ಸಿದ್ದು ಪಿ.ಅಲಗೂರು, ಕುಲಸಚಿವರಾದ ಪೆÇ್ರ.ಎಸ್.ಸಿ.ಪಾಟೀಲ್ ಹಾಗೂ ಕುಲಸಚಿವರಾದ(ಮೌಲ್ಯಮಾಪನ) ಪ್ರೋ.ರಮೇಶ್ ಓ.ಓಲೇಕಾರ್ ಸೇರಿದಂತೆ ಸಿಂಡಿಕೇಟ್ ಮತ್ತು ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತÀರಿರುವರು ಎಂದು ವಿವಿ ಪ್ರಕಟಣೆ ತಿಳಿಸಿದೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ