ಜವಾಹರ್ ನವೋದಯ ವಿದ್ಯಾಲಯ: 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬಳ್ಳಾರಿ,ಜು.07(ಕರ್ನಾಟಕ ವಾರ್ತೆ):
ಜವಾಹರ ನವೋದಯ ವಿದ್ಯಾಲಯಗಳಿಗೆ 2024-25 ನೇ ಸಾಲಿಗೆ 6 ನೇ ಪ್ರವೇಶ ಪರೀಕ್ಷೆಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜವಾಹರ್ ನವೋದಯ ವಿದ್ಯಾಲಯದ ಅಧೀಕೃತ ವೆಬ್‍ಸೈಟ್ www.navodaya.gov.in ಗೆ ಭೇಟಿ ನೀಡಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್ 10 ಆಗಿರುತ್ತದೆ. 2024 ರ ಜನವರಿ 20 ರಂದು ಆಯ್ಕೆ ಪ್ರವೇಶ ಪರೀಕ್ಷೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
------
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ